ಹುಬ್ಬಳ್ಳಿ :ಪೊಲೀಸ್ ಕಮಿಷನರ್ಗಳು ಹಾಗೂ ಹಿರಿಯ ಅಧಿಕಾರಿಗಳು ಫೀಲ್ಡ್ಗೆ ಇಳಿದು ಕೆಲಸ ಮಾಡಬೇಕು. ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದರು.
ನಗರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪೊಲೀಸ್ ಕಾರ್ಯದಕ್ಷತೆ ಬಗ್ಗೆ ಪಾಠ ಮಾಡಿದ ಸಿಎಂ, ಕಚೇರಿಯಲ್ಲಿ ಕುಳಿತು ಆಡಳಿತ ಕೆಲಸ ಮಾಡುವುದಷ್ಟೇ ಪೊಲೀಸರ ಕರ್ತವ್ಯವಲ್ಲ. ಫೀಲ್ಡ್ಗೆ ಇಳಿದು ಕಮಿಷನರ್, ಡಿಸಿಪಿಗಳು ಕೆಲಸ ಮಾಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೆಳ ಹಂತದ ಕಾರ್ಯವೈಖರಿ ತಿಳಿಯಲು ಹಿರಿಯ ಅಧಿಕಾರಿ ಠಾಣೆಗಳಿಗೆ ಹೋಗಿ ಕುಳಿತುಕೊಳ್ಳಬೇಕು. ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ಕ್ರೈಂ ಪ್ರಕರಣ ಹೆಚ್ಚುತ್ತಿವೆ. ಐದಾರು ಠಾಣೆಗಳ ಕಾರ್ಯವೈಖರಿ ಬದಲಾಗಬೇಕಿದೆ. ಹುಬ್ಬಳ್ಳಿ-ಧಾರವಾಡ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸುವುದು ಕಷ್ಟವಲ್ಲ ಎಂದರು.