ಹುಬ್ಬಳ್ಳಿ: ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ನಿರ್ಣಯ ಕೈಗೊಂಡ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಧನ್ಯವಾದ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುನ್ನಡೆಯಿರಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಗರದ ಕೃಷ್ಣಾಪುರದಲ್ಲಿ ನೂತನವಾಗಿ ನಿರ್ಮಿಸಲಾದ ಕಾರ್ಮಿಕ ಭವನ ಹಾಗೂ ಮೂರು ಶ್ರಮಿಕ ಸಂಜೀವಿನಿ ಮೊಬೈಲ್ ಕ್ಲಿನಿಕ್ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷ ಬಲಿಷ್ಠವಾಗಬೇಕೆಂಬ ನಿರೀಕ್ಷೆಯನ್ನು ಹುಸಿಗೊಳಿಸಲ್ಲ. ಮುಂಬರುವ ಚುನಾವಣೆಯ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದರು.
ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಅರುಣ್ ಸಿಂಗ್ ಮತ್ತು ಕಟೀಲ್ ನೇತೃತ್ವದಲ್ಲಿ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆಯುತ್ತಿದೆ. ಅರವಿಂದ್ ಬೆಲ್ಲದ ಮಹಾನಗರ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರೋ ವಿಚಾರ ನನಗೆ ಗೊತ್ತಿಲ್ಲ. ಅವರು ಸಿಕ್ಕ ಕೂಡಲೇ ಆ ಬಗ್ಗೆ ವಿಚಾರಿಸುತ್ತೇನೆ. ವರಿಷ್ಠರಿಗೆ ಇರುವ ಸ್ಪಷ್ಟತೆಯನ್ನು ಅರುಣ್ ಸಿಂಗ್ ಅವರು ಕಾರ್ಯಕಾರಿಣಿಯಲ್ಲಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಮೊದಲಿನಿಂದಲೂ ನನ್ನ ಮೇಲೆ ವರಿಷ್ಠರಿಗೆ ವಿಶ್ವಾಸವಿದೆ. ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರಿಗೆ ಎಲ್ಲಿಗೆ ಬೇಕಾದ್ರೂ ಹೋಗುವ ಸ್ವಾತಂತ್ರ್ಯವಿದೆ ಎಂದರು.
ಇದನ್ನೂ ಓದಿ : ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಶೆಟ್ಟರ್ ನಡುವೆ ಮುಂದುವರೆದ ಶೀತಲ ಸಮರ