ಹುಬ್ಬಳ್ಳಿ : ರಾಜ್ಯ ಬಜೆಟ್ ಮಾರ್ಚ್4 ರಂದು ನಡೆಯುತ್ತೆ. ಎಲ್ಲೆಲ್ಲಿ ಯಾವ ಪ್ರದೇಶಕ್ಕೆ ಏನಾಗುತ್ತೆ ಗೊತ್ತಾಗುತ್ತೆ. ಬಜೆಟ್ನಲ್ಲಿ ಏನಿದೆ ಅನ್ನೋದನ್ನ ಹೇಳೋದು ತಪ್ಪಾಗುತ್ತೆ. ಅದರ ಬಗ್ಗೆ ಮಾರ್ಚ್ 4 ರಂದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಎಸ್ಡಿಪಿಐ, ಪಿಎಫ್ಐ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲ ಘಟನೆಗಳನ್ನ ಹಿರಿಯ ಪೊಲೀಸ್ ಅಧಿಕಾರಿಗಳು ಬಹಳ ಕೂಲಂಕಷವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆದ ಹಲವಾರು ಘಟನೆಗಳು ಸೇರಿದಂತೆ, ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಶಾಂತಿ ಕದಡುವುದು, ಮತೀಯ ದ್ವೇಷ ಬಿತ್ತುವಂತಹದ್ದನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಾರೆ. ಅದರ ಆಧಾರದ ಮೇಲೆ ಬರುವಂತಹ ದಿನದಲ್ಲಿ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.
ಕಾಂಗ್ರೆಸ್ ಮೇಕೆದಾಟು ಹೋರಾಟ, ಅದು ರಾಜಕೀಯ ಪಾದಯಾತ್ರೆ. ಅವರು ಮೊದಲು ಮಾಡಿದ್ದು ಅದನ್ನೇ, ಈಗ ಮಾಡೋದು ಅದನ್ನೇ. ಅವರ ಕಾಲದಲ್ಲಿ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದ್ದರು. ಕುಮಾರಸ್ವಾಮಿ ಬಂದ ಮೇಲೆ ಡಿಪಿಆರ್ ಸಿದ್ಧವಾಯ್ತು. ಹೀಗಾಗಿ ಯಾವ ನೈತಿಕ ಆಧಾರದ ಮೇಲೆ ಹೀಗೆ ಹೇಳ್ತಾರೆ ಎಂದು ಪಾದಯಾತ್ರೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ : ಕೋವಿಡ್ ಸಂಕಷ್ಟ ಹಿನ್ನೆಲೆ ಸರಳ ಹುಟ್ಟುಹಬ್ಬ ಆಚರಣೆ.. ಹಾರ, ತುರಾಯಿ ತರಬೇಡಿ ಎಂದ ಬಿಎಸ್ವೈ
ಉಕ್ರೇನ್ನಲ್ಲಿ ವಿದ್ಯಾರ್ಥಿಗಳು ಸಿಲುಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಪೂರ್ವ ಭಾಗದಲ್ಲಿ ಹೆಚ್ಚು ಅಲ್ಲೇ ವಿದ್ಯಾರ್ಥಿಗಳಿದ್ದಾರೆ ಯುದ್ಧದ ತೀವ್ರತೆ ಕಡಿಮೆ ಆದ ತಕ್ಷಣ ಪುಟಿನ್ ಜೊತೆ ಮೋದಿ ಮಾತನಾಡಲಿದ್ದಾರೆ. ಈಗಾಗಲೇ ಕೇಂದ್ರ ವಿದೇಶಾಂಗ ಸಚಿವರು ಸಂಪರ್ಕದಲ್ಲಿದ್ದಾರೆ ಎಂದರು.