ಕರ್ನಾಟಕ

karnataka

ETV Bharat / state

ಅಲ್ಪಸಂಖ್ಯಾತ ಮತಗಳನ್ನು ಡಿಲೀಟ್ ಮಾಡಿದ್ದು ಸುಳ್ಳು: ಸಿಎಂ ಬೊಮ್ಮಾಯಿ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಲ್ಪಸಂಖ್ಯಾತ ಮತಗಳನ್ನು ಡಿಲೀಟ್ ಮಾಡಿದ್ದಾರೆ ಎನ್ನಲಾದ ಪ್ರಕರಣ ಕುರಿತು ಈಗಾಗಲೇ ಚುನಾವಣಾ ಆಯೋಗ ಗಮನಹರಿಸಿದೆ. ಕೇಂದ್ರ ಚುನಾವಣಾ ಆಯೋಗದ ನೇತೃತ್ವದಲ್ಲಿ ಮತಗಳನ್ನು ಡಿಲೀಟ್ ಮಾಡುವುದು ಹಾಗೂ ಸೇರಿಸುವ ಪ್ರಕ್ರಿಯೆ ಆಗಲಿದೆ.- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Dec 2, 2022, 6:54 PM IST

ಹುಬ್ಬಳ್ಳಿ:ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಅಲ್ಪಸಂಖ್ಯಾತ ಮತಗಳನ್ನು ಡಿಲೀಟ್ ಮಾಡಿದ್ದು ಸುಳ್ಳು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಗಳನ್ನು ಡಿಲೀಟ್ ಮಾಡಿರುವ ಪ್ರಕರಣದ ಕುರಿತು ಇಗಾಗಲೇ ಚುನಾವಣಾ ಆಯೋಗ ಗಮನ ಹರಿಸಿದೆ. ಕೇಂದ್ರ ಚುನಾವಣಾ ಆಯೋಗದ ನೇತೃತ್ವದಲ್ಲಿ ಮತಗಳನ್ನು ಡಿಲೀಟ್ ಮಾಡುವುದು ಹಾಗೂ ಸೇರಿಸುವ ಪ್ರಕ್ರಿಯೆ ಆಗಲಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಎಲ್ಲ ರೀತಿಯಲ್ಲಿ ತನಿಖೆ ನಡೆಯಲಿದೆ. ಈ ಬಗ್ಗೆ ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಕಾಳಜಿ ವಹಿಸಿದೆ. ಎಲ್ಲೆಲ್ಲಿ ದೂರುಗಳು ಬಂದಿವೆ ಅಲ್ಲಿ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸ ಆಗಿದೆ. ಅದು ಬೆಂಗಳೂರು, ಹುಬ್ಬಳ್ಳಿಯಲ್ಲೂ ಇರಬಹುದು. ಅನಧಿಕೃತ ಮತಗಳನ್ನು ತಗೆಯುವ ಕೆಲಸ ಆಗುತ್ತಿದೆ. ಅಧಿಕೃತವಾಗಿದ್ದವರಿಗೆ ಮತದಾನ ಹಕ್ಕು ಇರುತ್ತದೆ. ಅಧಿಕೃತ, ಅನಧಿಕೃತ ಮತದಾರರನ್ನು ನೋಡುವಂತಹ ಕೆಲಸ ಚುನಾವಣಾ ಆಯೋಗ ಮಾಡುತ್ತದೆ ಎಂದು ತಿಳಿಸಿದರು.

ಗಡಿ ವಿವಾದ ಕುರಿತ ಪ್ರತಿಕ್ರಿಯಿಸುತ್ತಾ, ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆ ಪ್ರಕರಣದ ಬಗ್ಗೆ ನಾನು ತನಿಖೆ ಮಾಡಲು ಸೂಚಿಸಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ. ಯುವಕನ ಮೇಲೆ ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇಸ್ ಇರುವ ಕಾರಣಕ್ಕೆ ಇದೀಗ ಮಹಾರಾಷ್ಟ್ರದವರು ವಿವಾದ ಮಾಡಿದ್ದಾರೆ ಎಂದರು.

ಇದನ್ನೂ ಓದಿ:ಚಿಲುಮೆ ಮಾದರಿಯಲ್ಲಿ ಹುಬ್ಬಳ್ಳಿಯಲ್ಲೂ ಮತದಾರರ ಮಾಹಿತಿ ಸಂಗ್ರಹ ಆರೋಪ: ಮೂವರು ಪೊಲೀಸ್ ವಶಕ್ಕೆ

ABOUT THE AUTHOR

...view details