ಹುಬ್ಬಳ್ಳಿ:ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು. ಜನರು ಈಗಷ್ಟೆ ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೋರಾಟ ಮಾಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಭಾರತ ಬಂದ್ ಮಾಡಿ ಜನರಿಗೆ ತೊಂದರೆ ಮಾಡಬೇಡಿ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಗುಲಾಮಗಿರಿ ಪಾರ್ಟಿಯಾಗಿದೆ. ಅಲ್ಲದೇ ಬಿಜೆಪಿ ಆಡಳಿತ ನೋಡಿ ಮಾಜಿ ಸಿಎಂ ಸಿದ್ಧರಾಮಯ್ಯ ಹತಾಶರಾಗಿದ್ದಾರೆ. ಅವರು ಈ ಹಿಂದೆ ನಿಭಾಯಿಸಿದ ಸ್ಥಾನಕ್ಕೂ ಈಗ ನಡೆದುಕೊಳ್ಳುತ್ತಿರುವುದಕ್ಕೂ ಅಜಗಜಾಂತರ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಕೆಎಲ್ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿಯಾಗಿದೆ. ಅಲ್ಲದೇ ಬಿಜೆಪಿ ಆಡಳಿತ ನೋಡಿ ಮಾಜಿ ಸಿಎಂ ಸಿದ್ಧರಾಮಯ್ಯ ಹತಾಶರಾಗಿದ್ದಾರೆ. ಅವರು ಈ ಹಿಂದೆ ನಿಭಾಯಿಸಿದ ಸ್ಥಾನಕ್ಕೂ ಈಗ ನಡೆದುಕೊಳ್ಳುತ್ತಿರುವುದಕ್ಕೂ ತಕ್ಕದಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಭಾರತ ಬಂದ್ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್ಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.