ಹುಬ್ಬಳ್ಳಿ:ಬೆಂಗಳೂರು ಹೊರತುಪಡಿಸಿ 2ನೇ ಸ್ತರದ ನಗರಗಳ ಅಭಿವೃದ್ಧಿ ಹಾಗೂ ಕೈಗಾರಿಕೆಗಳನ್ನು ಸೆಳೆಯುವ ಬಿಯಾಂಡ್ ಬೆಂಗಳೂರು(Beyond Bengaluru) ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವರ್ಚುವಲ್ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್, ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ ಹಲವರು ಭಾಗಿಯಾಗಿದ್ದರು.