ಕರ್ನಾಟಕ

karnataka

ETV Bharat / state

ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಬಜರಂಗದಳ ನಿಷೇಧಿಸುವ ಉದ್ದೇಶ: ಸಿಎಂ ಬೊಮ್ಮಾಯಿ - ಕರ್ನಾಟಕ ವಿಧಾನಸಭೆ ಚುನಾವಣೆ 2023

ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ ಬಜರಂಗದಳ ನಿಷೇಧ ಆಗಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಜರಂಗದಳ ನಿಷೇಧದ ಬಗ್ಗೆ ಸಿಎಂ ಪ್ರತಿಕ್ರಿಯೆ

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

By

Published : May 3, 2023, 2:25 PM IST

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಹುಬ್ಬಳ್ಳಿ: ಬಜರಂಗದಳ ಇಡೀ ದೇಶದಲ್ಲಿ ಇರುವ ಸಂಘಟನೆಯಾಗಿದ್ದು, ಕಾಂಗ್ರೆಸ್​ಗೆ ದೇಶದಲ್ಲಿ ಅಧಿಕಾರವೇ ಇಲ್ಲ, ಅದನ್ನು ಹೇಗೆ ನಿಷೇಧಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಬಜರಂಗದಳ ನಿಷೇಧಿಸುವ ಬಗ್ಗೆ ಕಾಂಗ್ರೆಸ್​​​​​​ನವರು ಮಾತುಗಳನ್ನು ಆಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್'ನ ಪ್ರಣಾಳಿಕೆ ಮೋಸದ ಪ್ರಣಾಳಿಕೆ, ಜನರನ್ನು ಮರಳು ಮಾಡುವ ಪ್ರಣಾಳಿಕೆ. ಜನರು ಇದನ್ನು ದಿಕ್ಕರಿಸಲಿದ್ದಾರೆ. ನಾವು ಈಗಾಗಲೇ ಮಾಡಿದ ಕೆಲಸಗಳನ್ನೇ ತಾವು ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೀ ಸುಳ್ಳು ಹೇಳಿದ್ದಾರೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಪ್ರಣಾಳಿಕೆ ಮಾಡೋಕ್ಕೆ ಆರು ಲಕ್ಷ ಕೋಟಿ ಅನುದಾನ ಬೇಕಾಗುತ್ತದೆ. ಈಗಾಗಲೇ ಬಿಜೆಪಿ ಜಾರಿಗೆ ತಂದ ಯೋಜನೆಗಳನ್ನು ಪುನಃ ಜಾರಿ ಮಾಡುವುದಾಗಿ ಹೇಳಿದ್ದಾರೆ. ಜಲಜೀವನ್ ಮಿಷನ್ ಮೂಲಕ ಮನೆಮನೆಗೆ ನಲ್ಲಿ ಮುಖಾಂತರ ನೀರು ಕೊಡುವ ಕೆಲಸ ಆರಂಭಿಸಲಾಗಿದೆ ಎಂದರು. ಹೆಣ್ಣು ಮಕ್ಕಳಿಗೆ ಉಚಿತ ಬಸ್​ ಪಾಸ್ ಕೊಡುವ ವಿಚಾರವಾಗಿ ಮಾತನಾಡಿ, ನಾವು ಈಗಾಗಲೇ ಬಜೆಟ್​ನಲ್ಲಿ ಘೋಷಣೆ ಮಾಡಿದ್ದೇವೆ. ಮೀಸಲಾತಿ ಪ್ರಮಾಣವನ್ನು ಶೇ.75 ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಅದನ್ನು ಹೇಗೆ ಮಾಡತ್ತಾರೆ? ಕೇಂದ್ರದಲ್ಲಿ ಇವರ ಸರ್ಕಾರ ಇದೆ ನಾ? ಎಂದು ಪ್ರಶ್ನೆ ಮಾಡಿದರು. ಹಿಂದುಳಿದ ಜನಾಂಗ ನಿಗಮಗಳನ್ನು ಸ್ಥಾಪಿಸುವುದಾಗಿ ಹೇಳಿದೆ. ನಾನು ಈಗಾಗಲೇ ಘೋಷಣೆ ಮಾಡಿ ಆದೇಶ ಮಾಡಿದ್ದೇನೆ. ಕಾಂಗ್ರೆಸ್ ಅದನ್ನೇ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಬಜರಂಗದಳ ಬ್ಯಾನ್ ಆಗಲ್ಲ- ಸಿಎಂ; ಇಂದಿರಾ ಕಾಲದಲ್ಲೇ ಬ್ಯಾನ್‌ ಆಗಿಲ್ಲ ಅಂದ್ರು ಸಿ.ಸಿ.ಪಾಟೀಲ್

ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ ಬಜರಂಗದಳ ನಿಷೇಧ ಆಗಲ್ಲ (ಗದಗ): ಬಜರಂಗದಳ ನಿಷೇಧಿಸಬೇಕೆಂದರೆ ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ. ಬಜರಂಗದಳ ನಿಷೇಧ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವ್ಯಂಗ್ಯವಾಡಿದ್ದಾರೆ. ಬಜರಂಗದಳ ಬ್ಯಾನ್‌ ಮಾಡೋ ಪ್ರಶ್ನೆಯೇ ಇಲ್ಲ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ. ಭಜರಂಗದಳ ಸಾಮಾಜಿಕ, ಧಾರ್ಮಿಕವಾಗಿ ಕೆಲಸ ಮಾಡುವ ಸಂಘ ಅದು. ಪಿಎಫ್​ಐ ದೇಶವಿರೋಧಿ ಕೆಲಸ ಮಾಡಿದೆ. ಭಯೋತ್ಪಾದಕ ‌ಕೆಲಸದಲ್ಲಿ ತೊಡಗಿದೆ. ಅವರ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿರುವ ಪುರಾವೆಗಳೂ ಇವೆ. ಆದ ಕಾರಣ ಪಿಎಫ್​ಐಯನ್ನು ಬಜರಂಗದಳಕ್ಕೆ ಹೊಲಿಸುವುದು ಸರಿಯಲ್ಲ ಎಂದು ಸಿಎಂ ಹೇಳಿದ್ದಾರೆ.

ನಾವು ಮಾಡಿದ್ದನ್ನು ಕಾಂಗ್ರೆಸ್ ತಮ್ಮ‌‌ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ. ನಾವು ನೀರು ಕೊಟ್ಟಿದ್ದೇವೆ ಆದರೇ ಅವರು ಕುಡಿಯುವ ನೀರು ಕೋಡುತ್ತೇವೆ ಅಂತಾ ಹೇಳಿದ್ದಾರೆ. ಹೆಣ್ಣು ಮಕ್ಕಳಿಗೆ ಪಾಸ್ ಕೊಡ್ತೇವೆ ಅಂತಾರೆ. ನಾವು ಆಗಲೇ ಅದನ್ನು ಕೊಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯನ್ನು ಕಾಂಗ್ರೆಸ್ ಕಟ್ ಆ್ಯಂಡ್ ಪೇಸ್ಟ್ ಮಾಡಿದೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ಚುನಾವಣೆಗಾಗಿ ಕಾಂಗ್ರೆಸ್‌ ದೇಶ ವಿರೋಧಿ ಶಕ್ತಿಗಳ ಸಹಾಯ ಪಡೆಯುತ್ತದೆ: ಮುಲ್ಕಿಯಲ್ಲಿ ಮೋದಿ ಗಂಭೀರ ಆರೋಪ

ABOUT THE AUTHOR

...view details