ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಭ್ರಷ್ಟಾಚಾರ ಕುರಿತು ಮಾತನಾಡುವುದೇ ಹಾಸ್ಯಾಸ್ಪದ : ಸಿಎಂ ಬೊಮ್ಮಾಯಿ - ಭ್ರಷ್ಟಾಚಾರದ ಅವಿಭಾಜ್ಯ ಅಂಗವಾದ ಕಾಂಗ್ರೆಸ್

ಕಾಂಗ್ರೆಸ್ ಭ್ರಷ್ಟಾಚಾರ ಕುರಿತು ಮಾತನಾಡುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗವಾಡಿದ್ದಾರೆ.

cm
ಸಿಎಂ ಬೊಮ್ಮಾಯಿ

By

Published : Apr 25, 2023, 1:19 PM IST

ಹುಬ್ಬಳ್ಳಿ:ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗವಾದ ಕಾಂಗ್ರೆಸ್ ಭ್ರಷ್ಟಾಚಾರ ಕುರಿತು ಮಾತನಾಡುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ನಿನ್ನೆ ನಡೆದ ಬಿಜೆಪಿಯ ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದರೆ ಬಿಜೆಪಿ ಅಲೆ ರಾಜ್ಯದ ತುಂಬಾ ಇರುವುದಕ್ಕೆ ಸಾಕ್ಷಿಯಾಗಿದೆ. ನರೇಂದ್ರ ಮೋದಿ, ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿ ಮಯ ಆಗುವುದರಲ್ಲಿ ಸಂಶಯವಿಲ್ಲ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪ್ರಧಾನಿಯಿಂದ ಹಿಡಿದು ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ. ಕೆಲವು ಕಾರ್ಯಕ್ರಮ ಓವರ್‌ಲ್ಯಾಪ್ ಆಗುತ್ತಿದ್ದು, ಇಂದು ರಾತ್ರಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಇನ್ನು ಲಿಂಗಾಯತ ಸಿಎಂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ನಾನು ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಒಂದು ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ.

ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ. ನನ್ನ ಮೇಲೆ‌ ಮಾಡಿರುವ ಆರೋಪದ ಕುರಿತು ಸಿದ್ಧರಾಮಯ್ಯ ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಜೊತೆಗೆ ಭ್ರಷ್ಟಾಚಾರದ ಕೂಪವಾಗಿರುವ ಕಾಂಗ್ರೆಸ್​ ಪಕ್ಷದಲದಲಿ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ. ಹೊರಗಡೆ ಬೇಲಲ್ಲಿ ಬಂದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಹರಿಹಾಯ್ದರು.

ಇದನ್ನೂ ಓದಿ:ಪ್ರಧಾನಿ - ಅದಾನಿಗೂ ಇರುವ ಸಂಬಂಧ ಏನು?: ಮತ್ತೆ ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಬೊಮ್ಮಾಯಿ ಕುರಿತು ಸಿದ್ದರಾಮಯ್ಯ ಭ್ರಷ್ಟಚಾರ ಆಪಾದನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಈಗಾಗಲೇ ಲಿಂಗಾಯತ ಮುಖ್ಯಮಂತ್ರಿ ಇದ್ದಾರೆ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆಗೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೇ ,ಈ ಬಗ್ಗೆ ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು. ನಂತರ ಈ ಕುರಿತು ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೂಡ ನೀಡಿದ್ದರು.

ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿದ್ದಾರೆ. ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂತಹ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಆದರೆ ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಲ್ಲ ಇದೆಲ್ಲ ಬಿಜೆಪಿ ಸೃಷ್ಟಿಸಿದ ಸುಳ್ಳು ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ:ಪ್ರಚಾರಕ್ಕೆ ಪ್ರಧಾನಿಯನ್ನಾದರೂ ಕರೆಸಿಕೊಳ್ಳಲಿ, ಅಮೆರಿಕ ಅಧ್ಯಕ್ಷರನ್ನಾದರೂ ಕರೆಸಿಕೊಳ್ಳಲಿ: ಆತಂಕ ಇಲ್ಲ ಎಂದ ಹೆಚ್​​​ಡಿಕೆ

ABOUT THE AUTHOR

...view details