ಹುಬ್ಬಳ್ಳಿ:ನಾಡೋಜ ಪಾಟೀಲ್ ಪುಟ್ಟಪ್ಪನವರು ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದ, ಅವರು ಆದಷ್ಟು ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಾಟೀಲ್ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಸಿಎಂ - Latest News For Patil Puttappa
ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ನಾಡೋಜ ಪಾಟೀಲ್ ಪುಟ್ಟಪ್ಪ ಅವರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
![ಪಾಟೀಲ್ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಸಿಎಂ CM meet Patil puttappa](https://etvbharatimages.akamaized.net/etvbharat/prod-images/768-512-6416877-thumbnail-3x2-dr.jpg)
ಪಾಟೀಲ್ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಸಿಎಂ
ಪಾಟೀಲ್ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಸಿಎಂ
ನಗರದ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿ ಮಾತನಾಡಿದ ಅವರು, ಪಾಪು ಅವರು 2017 ರಲ್ಲಿ ಬಸವ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು, ಕಾರಣಾಂತರಗಳಿಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಲ, ಈಗ ಪ್ರಶಸ್ತಿ ಪ್ರದಾನ ಮಾಡಲಾಗಿದೆ, ಇದರೊಂದಿಗೆ 10 ಲಕ್ಷ ರೂ. ಹಣವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.