ಧಾರವಾಡ: ಬೆಂಗಳೂರಿನಲ್ಲಿ ಪಿಲ್ಲರ್ ಬಿದ್ದು ತಾಯಿ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಈಗತಾನೇ ನೀವು ಹೇಳಿದ ಮೇಲೆ ವಿಷಯ ಗೊತ್ತಾಗಿದೆ. ವಿಚಾರಣೆ ಮಾಡುತ್ತೇನೆ. ಘಟನೆ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಕಾರಣ ಕೇಳುತ್ತೇನೆ. ಮೃತಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗುವುದು ಎಂದಿದ್ದಾರೆ. ಕಳಪೆ ಕಾಮಗಾರಿ ವಿಚಾರದ ಕುರಿತು ಮಾತನಾಡಿದ ಅವರು, ಈಗಷ್ಟೇ ಸುದ್ದಿ ಗೊತ್ತಾಗಿದ್ದು, ಆ ಬಗ್ಗೆ ತಿಳಿದುಕೊಂಡು ಮಾತನಾಡುವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪಿಲ್ಲರ್ ಬಿದ್ದ ಪ್ರಕರಣ.. ಘಟನೆ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ ಎಂದ ಸಿಎಂ - CM Basavaraja Bommai
ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ- ಧಾರವಾಡದಲ್ಲಿ ಸಿಎಂ ಪ್ರತಿಕ್ರಿಯೆ - ಘಟನೆಗೆ ಕಾರಣ ಕೇಳುತ್ತೇನೆ ಎಂದ ಬೊಮ್ಮಾಯಿ

ಬಳಿಕ ಹಳಿಯಾಳ ರಸ್ತೆಯ ಮಗದುಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಲಿಂಗರಾಜ ವಿವಿಧೋದ್ದೇಶ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ಸಿರಸಂಗಿ ಶ್ರೀ ಲಿಂಗರಾಜ ರಾಜ್ಯಮಟ್ಟದ 162ನೇ ಜಯಂತ್ಯುತ್ಸವದಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಸಚಿವ ಎಂ.ಬಿ. ಪಾಟೀಲ್, ಗದಗಿನ ತೋಂಟದಾರ್ಯ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ, ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧರಾಜಯೋಗೇಂದ್ರ ಮಹಾಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ್ ಭಾಗಿಯಾಗಿದ್ದರು.
ಇದನ್ನೂ ಓದಿ:ಬೆಂಗಳೂರಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ.. ತಾಯಿ ಮಗ ಸಾವು