ಧಾರವಾಡ :ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.
ಕಣವಿ ಅವರ ಕುಟುಂಬ ಸದಸ್ಯರೊಂದಿಗೆ ಭಾನುವಾರ ಮಾತನಾಡಿರುವ ಸಿಎಂ, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.