ಧಾರವಾಡ:ಮಹಾಮಳೆಗೆ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಖನ್ನೂರು ಗ್ರಾಮದಲ್ಲಿ ನಡೆದಿದೆ.
ಶೇಖವ್ವ ಶಿವಪ್ಪ ತಿಮ್ಮಣ್ಣವರ ( 75) ಎಂಬ ವೃದ್ಧೆ ಘಟನೆಯಲ್ಲಿ ಮೃತಪಟ್ಟ ದುರ್ದೈವಿ.
ಧಾರವಾಡ:ಮಹಾಮಳೆಗೆ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಖನ್ನೂರು ಗ್ರಾಮದಲ್ಲಿ ನಡೆದಿದೆ.
ಶೇಖವ್ವ ಶಿವಪ್ಪ ತಿಮ್ಮಣ್ಣವರ ( 75) ಎಂಬ ವೃದ್ಧೆ ಘಟನೆಯಲ್ಲಿ ಮೃತಪಟ್ಟ ದುರ್ದೈವಿ.
ಮಳೆಯಿಂದ ಮನೆಯ ಮಣ್ಣಿನ ಗೋಡೆ ಪೂರ್ಣ ನೆನೆದಿದ್ದು ಗೋಡೆ ಕುಸಿದಿದೆ. ನವಲಗುಂದ ಸರ್ಕಾರಿ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ನವಲಗುಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೋಗಾನೂರು ಗ್ರಾಮದ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಬೆಣ್ಣೆ ಹಳ್ಳಕ್ಕೆ ಪ್ರವಾಹ ಬಂದ ಹಿನ್ನೆಲೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.