ಧಾರವಾಡ:ಸುಮಾರು ಎಂಟು ತಿಂಗಳ ನಂತರ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಬಿ.ಎ. ಮತ್ತು ಬಿ.ಕಾಂ ಅಂತಿಮ ವರ್ಷದ ತರಗತಿಗಳು ನಡೆದವು. ಆದರೆ, ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು.
ಈ ಕುರಿತು ಮಾತನಾಡಿದ ಪ್ರಾಂಶುಪಾಲರಾದ ಎಂ.ಎಸ್. ಗಾಣಿಗೇರ, ಕೊರೊನಾ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ತರಗತಿಗಳನ್ನು ಆರಂಭಿಸಲಾಗಿದೆ. ಕಾಲೇಜು ಆರಂಭದಲ್ಲಿಯೇ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ.