ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುತ್ತಿದೆ ಅಪರಾಧ; ಪೊಲೀಸ್ ಸಿಬ್ಬಂದಿಗೆ ಆಯುಕ್ತರಿಂದ ಬಿಸಿ - Crime incidents in Hubli

ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಅಪರಾಧ ಕೃತ್ಯಗಳಿಂದ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಕ್ರೈಂ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಜೋರಾಗಿ ಕೇಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆಯುಕ್ತರು ಪೊಲೀಸ್ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ಆಯುಕ್ತ ಆರ್. ದಿಲೀಪ್​ ನೋಟಿಸ್

By

Published : Sep 22, 2019, 2:13 PM IST

ಹುಬ್ಬಳ್ಳಿ:ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಹುಬ್ಬಲ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, 30 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.

ಪೊಲೀಸ್ ಆಯುಕ್ತ ಆರ್. ದಿಲೀಪ್​

ಕಳೆದ ಕೆಲ ದಿನಗಳಿಂದ ಅವಳಿನಗರದಲ್ಲಿ ಅಪರಾಧ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು​ ಕ್ರೈಂ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಆರ್ ದಿಲೀಪ್ ನೋಟಿಸ್ ಜಾರಿ ಮಾಡಿದ್ದಾರೆ.

ಡಿಸಿಪಿ ಶಿವಕುಮಾರ್ (ಕ್ರೈಂ ಮತ್ತು ಟ್ರಾಫಿಕ್ ನಿಯಂತ್ರಣ ವಿಭಾಗ) ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೆ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಅವಳಿ ನಗರದಲ್ಲಿ ಕಳೆದೊಂದು ವಾರದಲ್ಲಿ 8 ಕ್ಕೂ ಹೆಚ್ಚು ಚಾಕು ಇರಿತ, 3 ಕೊಲೆ ಪ್ರಕರಣಗಳು ನಡೆದಿದ್ದು, ನಿನ್ನೆ(ಶನಿವಾರ) ಶೂಟೌಟ್ ಘಟನೆ ಹಿನ್ನೆಲೆಯಲ್ಲಿ ಕೆಳ ಹಂತದ ಅಧಿಕಾರಿಗಳ‌ಿಗೂ ಆಯುಕ್ತರು ಬಿಸಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details