ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎನ್ನಲಾದ ಬ್ಯಾಗ್ ಪತ್ತೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹು- ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್ ದಿಢೀರ್ ಭೇಟಿ ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪೊಲೀಸ್ ಆಯುಕ್ತರ ದಿಢೀರ್ ಭೇಟಿ - Airport security inspection
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹು-ಧಾ ಪೊಲೀಸ್ ಆಯುಕ್ತ ಆರ್. ದಿಲೀಪ್ ದಿಢೀರ್ ಭೇಟಿ ನೀಡಿ ವಿಮಾನ ನಿಲ್ದಾಣದ ಭದ್ರತೆ ಪರಿಶೀಲನೆ ನಡೆಸಿದರು.
commissioner-visit-hubli-airport
ವಿಮಾನ ನಿಲ್ದಾಣದ ಭದ್ರತೆ ಪರಿಶೀಲನೆಯ ಜೊತೆಗೆ ವಿಮಾನ ನಿಲ್ದಾಣದೊಳಗಡೆಯೂ ಶ್ವಾನ ದಳದ ಸಹಾಯದೊಂದಿಗೆ ಪೊಲೀಸ್ ಆಯುಕ್ತರು ಪರಿಶೀಲನೆ ನಡೆಸಿದರು.
ಕಳೆದ ಎರಡು ತಿಂಗಳ ಹಿಂದೆ ನಗರದ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾದ ವಸ್ತು ಸ್ಫೋಟಗೊಂಡಿತ್ತು. ಹೀಗಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಅತೀ ಸೂಕ್ಷ್ಮ ಪ್ರದೇಶಗಳಾಗಿದ್ದು , ನಿತ್ಯ ಸಾವಿರಾರು ಜನರು ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಭದ್ರತೆಯನ್ನು ಒದಗಿಸುವ ದೃಷ್ಠಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಪೊಲೀಸ್ ಆಯುಕ್ತ ಆರ್. ದಿಲೀಪ್ ಭೇಟಿ ನೀಡಿದ್ದಾರೆ.