ಕರ್ನಾಟಕ

karnataka

ETV Bharat / state

ನಟ ಚೇತನ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂಪರ ಸಂಘಟನೆ ಮುಖಂಡರು - ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂಪರ ಸಂಘಟನೆ ಮುಖಂಡರು

ಭೂತಕೋಲ ಆಚರಣೆ ಕುರಿತು ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

complaint against actor chetan
ನಟ ಚೇತನ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂಪರ ಸಂಘಟನೆ ಮುಖಂಡರು

By

Published : Oct 21, 2022, 7:28 AM IST

ಧಾರವಾಡ: ಕನ್ನಡದ ಕಾಂತಾರ ಚಲನ ಚಿತ್ರದ ವಿರುದ್ಧ ಮಾತನಾಡಿರುವ ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಾಂತಾರ ಚಿತ್ರದಲ್ಲಿ ಬರುವ ಭೂತಾರಾಧನೆ ಬಗ್ಗೆ ನಟ ಚೇತನ ಅವರು ಮಾತನಾಡಿದ್ದಾರೆ. ಭೂತಾರಾಧನೆ ಹಿಂದೂಗಳದ್ದಲ್ಲ ಎಂದು ಹೇಳಿಕೆ ನೀಡುವ ಮೂಲಕ ಹಿಂದೂ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಬಂಧನ ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪನಗರ ಪೊಲೀಸ್ ಠಾಣೆಯಲ್ಲಿ ನಟ ಚೇತನ್ ವಿರುದ್ಧ ದೂರು ಸಲ್ಲಿಸಿದ್ದಾರೆ.

ನಟ ಚೇತನ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂಪರ ಸಂಘಟನೆ ಮುಖಂಡರು

ಇದನ್ನೂ ಓದಿ:ಹಿಂದಿ ಹೇರಿಕೆ ಹೇಗೆ ಒಪ್ಪೋಕಾಗಲ್ವೋ ಹಿಂದುತ್ವ ಹೇರಿಕೆಯನ್ನೂ ಒಪ್ಪಲಾಗಲ್ಲ: ನಟ ಚೇತನ್​​

ಪ್ರಚಾರ ಪಡೆದುಕೊಳ್ಳುವುದಕ್ಕೆ ಚೇತನ ಅವರು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಕಾಂತಾರ ಚಿತ್ರದಲ್ಲಿರುವ ಹಿಂದೂ ಆಚರಣೆಗಳ ಬಗ್ಗೆ ಚೇತನ್ ಅವರು ಅಪಸ್ವರ ಎತ್ತಿದ್ದಾರೆ. ಚೇತನ್ ಭಾರತದ ಪ್ರಜೆಯೇ ಅಲ್ಲ. ಆದರೂ ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಹಿಂದೂ ಜಾಗರಣ ವೇದಿಕೆ‌ಯಿಂದ ನಟ ಚೇತನ್ ವಿರುದ್ಧ ದೂರು ದಾಖಲು

ABOUT THE AUTHOR

...view details