ಕರ್ನಾಟಕ

karnataka

ETV Bharat / state

ಸಾವರ್ಕರ್ ಫೋಟೋ ಸುಟ್ಟ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲು

ಧಾರವಾಡದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲು ಮಾಡಲಾಗಿದೆ.

complaint register on Congress workers  Savarkar photo burning case  Savarkar photo burning case in Dharwad  Dharwad congress protest news  ಸಾವರ್ಕರ್ ಫೋಟೋ ಸುಟ್ಟ ಪ್ರಕರಣ  ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ  ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ  ಧಾರವಾಡ ಕಾಂಗ್ರೆಸ್​ ಪ್ರತಿಭಟನೆ ಸುದ್ದಿ
ಸಾವರ್ಕರ್ ಫೋಟೋ ಸುಟ್ಟ ಪ್ರಕರಣ

By

Published : Aug 20, 2022, 1:28 PM IST

ಧಾರವಾಡ: ನಗರದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಮೇಲೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಜರಂಗ ದಳ ಮುಖಂಡ ಶಿವಾನಂದ ಸತ್ತಿಗೇರಿ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದ್ದು, ಕಾಂಗ್ರೆಸ್ ಮಹಾನಗರ, ಗ್ರಾಮೀಣ ಜಿಲ್ಲಾಧ್ಯಕ್ಷ ಸೇರಿ 12 ಜನರ ಹೆಸರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ.

ನಿನ್ನೆ ಮಧ್ಯಾಹ್ನ ಜಿಲ್ಲಾಧಿಕಾರಿ‌ ಕಚೇರಿ ಎದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕೃತಿ ದಹಿಸಿ ಸಾವರ್ಕರ್ ಭಾವಚಿತ್ರಕ್ಕೆ ಮೊಟ್ಟೆಯಿಂದ ಹೊಡೆದಿದ್ದರು. ಅಷ್ಟೇ ಅಲ್ಲ ಈ ವೇಳೆ, ಸಾವರ್ಕರ್ ಫೊಟೋಗಳನ್ನೂ ಕಾರ್ಯಕರ್ತರು ಸುಟ್ಟಿದ್ದರು. ಈ ಹಿನ್ನೆಲೆ ಹಿಂದೂಪರ ಮುಖಂಡ ಸತ್ತಿಗೇರಿ ದೂರು ದಾಖಲಿಸಿದ್ದರು.

ಎಫ್‌ಐಆರ್‌‌ನಲ್ಲಿ ಅರವಿಂದ ಏಗನಗೌಡರ್ ಆರೋಪಿ ನಂ.1 ಮಾಡಲಾಗಿದೆ. ಏಗನಗೌಡರ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ. ಎಫ್‌‌ಐಆರ್‌ನಲ್ಲಿ ಹೆಸರಿರುವ ಬಹುತೇಕರು ಕುಲಕರ್ಣಿ ಆಪ್ತರಾಗಿದ್ದಾರೆ. ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ ಮೇಲೂ ಎಫ್‌ಐಆರ್ ದಾಖಲಾಗಿದೆ.

ಸಾವರ್ಕರ್ ಫೋಟೋ ಸುಟ್ಟ ಪ್ರಕರಣ

ಏನಿದು ಪ್ರಕರಣ: ಬಿಜೆಪಿ ಕಾರ್ಯಕರ್ತರಿಂದ ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಖಂಡಿಸಿ ಶುಕ್ರವಾರ ಮಧ್ಯಾಹ್ನ ಧಾರವಾಡದಲ್ಲಿ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಪ್ರತಿಕೃತಿ ದಹಿಸಿದ್ದರು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂಬುದು ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಓದಿ:ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ​ಹಿಂದೂಪರ ಸಂಘಟನೆ ಪಟ್ಟು

ABOUT THE AUTHOR

...view details