ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಟಿಕೆಟ್ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ ಸಾವು - ಕಂಡಕ್ಟರ್​ ಹೃದಯಾಘಾತದಿಂದ ಸಾವು

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನಲ್ಲಿ ಹೃದಯಾಘಾತದಿಂದ ಕಂಡಕ್ಟರ್​ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮಹೇಶ ಹೂಗಾರ
ಮಹೇಶ ಹೂಗಾರ

By

Published : Nov 1, 2022, 2:55 PM IST

ಹುಬ್ಬಳ್ಳಿ:ನಗರ ಸಾರಿಗೆಯಲ್ಲಿ ಬಸ್ ಸಂಚರಿಸುತ್ತಿದ್ದಾಗಲೇ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ವಿದ್ಯಾನಗರದಲ್ಲಿ ಸಂಭವಿಸಿದೆ.

ಮಹೇಶ್​ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ ತರುವಷ್ಟರಲ್ಲಿಯೇ ನಿರ್ವಾಹಕ ಸಾವಿಗೀಡಾಗಿದ್ದಾರೆ.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈಗಾಗಲೇ ಹಲವು ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದು, ಪ್ರತಿ ಕ್ಷಣವೂ ಆತಂಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದೇ ಇವತ್ತಿನ ದುರ್ಘಟನೆಗೆ ಕಾರಣವಾಗಿದೆ.

ಓದಿ:ಮೈಸೂರು: ಏಕಾಏಕಿ ಹೃದಯಾಘಾತ... ಜೆಡಿಎಸ್ ಮುಖಂಡ ಸಾವು

ABOUT THE AUTHOR

...view details