ಧಾರವಾಡ: ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ವಿಜಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಾರನ್ನು ನಾನೇ ಚಲಾಯಿಸುತ್ತಿದ್ದೆ. ಬೈಕ್ ಅಡ್ಡ ಬಂದಾಗ, ಅದನ್ನ ತಪ್ಪಿಸಲು ಹೋಗಿ ಅಪಘಾತವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸೋಮವಾರ ರಾತ್ರಿ ಸಂಚಾರಿ ಪೊಲೀಸ್ ಠಾಣೆಗೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದ ಬಗ್ಗೆ ನಾನೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಆಂಬ್ಯುಲೆನ್ಸ್ನಲ್ಲಿ ಗಾಯಾಳುಗಳನ್ನ ಆಸ್ಪತ್ರೆಗೆ ಕರೆದೊಯ್ದ ಬಳಿಕ ಅಲ್ಲಿಂದ ತೆರಳಿದ್ದೇನೆ. ಅದು ಯಾವುದೇ ರೀತಿಯ ಡ್ರಂಕ್ ಆ್ಯಂಡ್ ಡ್ರೈವ್ ಅಲ್ಲ. ಈ ರೀತಿ ಸುಳ್ಳು ಹಬ್ಬಿಸುವುದು ಸರಿಯಲ್ಲ. ಈಗಾಗಲೇ ನನಗೆ ಟೆಸ್ಟ್ ಕೂಡಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.