ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಸಂಘಟನೆ ಜಪಕ್ಕೆ ಮುಂದಾಗಿದೆ. ಹೀಗಿದ್ದರೂ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸುತ್ತಿದ್ದು, ಇದಕ್ಕೆ ಸಾಕ್ಷಿಯಾಗಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಡಿಕೆಶಿ ಎದುರು ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ.. ವಿಡಿಯೋ ವೈರಲ್..! - ಹುಬ್ಬಳ್ಳಿ ಕಾಂಗ್ರೆಸ್ ಪಕ್ಷ ಸಭೆ
ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಚಟಾಪಟಿ ನಡೆಯುತ್ತಿದ್ದರೆ, ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಲು ಮುಂದಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ವಿಭಾಗೀಯ ನಾಯಕರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ವಿವಿಧ ಜಿಲ್ಲೆಗಳ ವಿಭಾಗೀಯ ನಾಯಕರ ಸಭೆ ನಡೆಸಲಾಗಿದೆ. ಅದರಲ್ಲಿ ಬೆಳಗಾವಿ, ಹುಬ್ಬಳ್ಳಿ - ಧಾರವಾಡ, ಹಾವೇರಿ, ಗದಗ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ ಜಿಲ್ಲಾ ನಾಯಕರ ಜೊತೆ ಸಮಾಲೋಚನೆ ಸಭೆ ಮಾಡುವಾಗ ದೊಡ್ಡದೊಂದು ಅವಾಂತರವೇ ನಡೆದಿದೆ.
ಧಾರವಾಡ ಜಿಲ್ಲೆಯ ಮುಖಂಡರ ಸಭೆ ನಡೆಯುತ್ತಿದ್ದ ಸಮಯದಲ್ಲಿ ಹು -ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡರ ಒಳಗಡೆ ಬಂದು ಹು-ಧಾ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ದಲಿತ ಯುವಕನ ಸ್ಥಾನವನ್ನ ಪಡೆದುದಲ್ಲದೇ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಡಿ.ಕೆ.ಶಿವಕುಮಾರ ನನ್ನ ಕಿಸೆಯಲ್ಲಿದ್ದಾರೆಂದು ಹೇಳಿಕೊಳ್ಳುತ್ತಾರೆಂದು ಉಸ್ತುವಾರಿಗಳ ಮುಂದೆ ಹೇಳಿಕೊಂಡಿದ್ದಾರೆ. ಸದ್ಯ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.