ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜನ್ಮ ದಿನದ ಪ್ರಯುಕ್ತ ನಗರದ ಚಿಟಗುಪ್ಪಿ ಆಸ್ಪತ್ರೆಯ ವೈದ್ಯರಿಗೆ ಕಾಂಗ್ರೆಸ್ ಕಾರ್ಯಕರ್ತರು ಸ್ಕೆತಸ್ಕೋಪ್, ಥರ್ಮಲ್ ಸ್ಕ್ರೀನಿಂಗ್, ಆಕ್ಸಿಮೀಟರ್ ಸಲಕರಣೆಗಳನ್ನು ನೀಡುವ ಮೂಲಕ ಜನ್ಮ ದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ.
ಡಿಕೆಶಿ ಜನ್ಮದಿನಾಚರಣೆ: ವೈದ್ಯರಿಗೆ ವೈದ್ಯಕೀಯ ಉಪಕರಣ ನೀಡಿದ ಕೈ ಕಾರ್ಯಕರ್ತರು - ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಜನ್ಮ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡದೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಿಗೆ ಅನುಕೂಲವಾಗುವಂಥ ಕಿಟ್ ನೀಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದರು. ಅದರಂತೆ ಕಾರ್ಯಕರ್ತರು ಜನ್ಮದಿನಾಚರಣೆ ಮಾಡಿದ್ದಾರೆ.

ಕೊರೊನಾ ಹಾವಳಿಗೆ ತತ್ತರಿಸಿರುವ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದು, ಎಲ್ಲಾ ರಾಜಕೀಯ ಮುಖಂಡರು ಸಹ ಇದಕ್ಕೆ ಬೆಂಬಲ ಸೂಚಿಸಿ ಕೊರೊನಾ ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಜನ್ಮ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡದೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಗಳಿಗೆ ಅನುಕೂಲವಾಗುವಂಥ ಕಿಟ್ ನೀಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದರು.
ಅದರಂತೆ ಕಾಂಗ್ರೆಸ್ ಕಾರ್ಯಕರ್ತರು ನಗರದ ಚಿಟಗುಪ್ಪಿ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳನ್ನು ನೀಡಿದ್ದಾರೆ. ಇವನ್ನು ಆರೋಗ್ಯ ಅಧಿಕಾರಿ ಡಾ. ಶ್ರೀಧರ ದಂಡೆಪ್ಪನ್ನವರ ಅವರಿಗೆ ಹಸ್ತಾಂತರ ಮಾಡಿದ್ದಾರೆ.