ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಹಾಗೂ ಕೈ ಕಾರ್ಯಕರ್ತರ ನಡುವೆ ಕೆಲಹೊತ್ತು ವಾಗ್ವಾದ ನಡೆದ ಘಟನೆ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಕೈ ಕಾರ್ಯಕರ್ತರು-ಪೋಲಿಸರ ಮಧ್ಯೆ ಮಾತಿನ ಚಕಮಕಿ
ಪೊಲೀಸ್ ಸಿಬ್ಬಂದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಹೊತ್ತು ವಾಗ್ವಾದ ನಡೆದ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೋಲಿಸರ ಮಧ್ಯೆ ಮಾತಿನ ಚಕಮಕಿ
ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಗಮನದ ಹಿನ್ನೆಲೆ ನಗರದ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪರಮೇಶ್ವರ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಹಾಗೂ ಪೊಲೀಸ್ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ಏರ್ಪಟಿತ್ತು.
ಇದೇ ವೇಳೆ ಪೊಲೀಸ್ ಅಧಿಕಾರಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.