ಧಾರವಾಡ: ಈರುಳ್ಳಿ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಉಳ್ಳಾಗಡ್ಡಿ ಮಾಲೆ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ರೀತಿಯ ಪ್ರತಿಭಟನೆ - ಉಳ್ಳಾಗಡ್ಡಿ ಮಾಲೆ ಧರಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆ ಇಂದು ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈರುಳ್ಳಿ ಮಾಲೆ ಧರಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈರುಳ್ಳಿ ಮಾಲೆ ಧರಿಸಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು
ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಉಳ್ಳಾಗಡ್ಡಿ ಮಾಲೆ ಧರಿಸಿ ವಿನೂತನ ಪ್ರತಿಭಟನೆ ನಡೆಸಿ ಬಿಜೆಪಿ ಬಡ ಕುಟುಂಬಗಳಿಗೆ ಟೋಪಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈರುಳ್ಳಿ ಮಾಲೆ ಮತ್ತು ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಕೇಂದ್ರದ ವಿರುದ್ದ ಅಸಮಾಧಾನ ಹೊರಹಾಕಿದ ಕಾರ್ಯಕರ್ತರು, 15 ಲಕ್ಷ ರೂ ಎಲ್ಲರಿಗೂ ನೀಡುತ್ತೇವೆ ಎಂದು ಹೇಳಿ ಮೋದಿ ಸರ್ಕಾರ ಮೋಸ ಮಾಡಿದೆ. ಅದಲ್ಲದೇ ಗ್ಯಾಸ್ ಸಬ್ಸಿಡಿ ಮತ್ತು ಜಿ.ಎಸ್.ಟಿ ಮೂಲಕ ನಮ್ಮಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.