ಕರ್ನಾಟಕ

karnataka

ETV Bharat / state

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ಶವಯಾತ್ರೆ - Bike funeral by congress activists

ಇಂಧನ ಬೆಲೆ ಹೆಚ್ಚಳ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಶವಯಾತ್ರೆ ನಡೆಸಿ ವಿನೂತನವಾಗಿ ಪ್ರತಿಭಟಿಸಿದರು.

congress activists protest against fuel price hike
ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ಶವಯಾತ್ರೆ

By

Published : Jun 25, 2020, 1:39 PM IST

ಧಾರವಾಡ:ಇಂಧನ ಬೆಲೆ ಹೆಚ್ಚಳ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶವದಂತೆ ಬೈಕ್​ ಹೊತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ಶವಯಾತ್ರೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದ ಪ್ರತಿಭಟನಾಕಾರರು ಉಳವಿ ಬಸವೇಶ್ವರ ವೃತ್ತದಿಂದ ಬೈಕ್ ಶವಯಾತ್ರೆ ನಡೆಸಿ ವಿನೂತನವಾಗಿ ಪ್ರತಿಭಟಿಸಿದರು. ಇನ್ನೂ ಕೆಲವರು ತಳ್ಳುಗಾಡಿಯಲ್ಲಿ ಬೈಕ್ ಇಟ್ಟು ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರ ದಿನೇ ದಿನೆ ಇಂಧನ ದರ ಏರಿಸುತ್ತಿರುವ ಕುರಿತು ವಿರೋಧ ವ್ಯಕ್ತಪಡಿಸಿ, ಘೋಷಣೆ ಕೂಗಿದರು.

ಮೆರವಣಿಗೆ ಮೂಲಕ ಡಿಸಿ ಕಚೇರಿ ತಲುಪಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜೊತೆಗೆ ಕೂಡಲೇ ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details