ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯೋಜಿಸಿರುವ ರಾಷ್ಟ್ರಪತಿಗಳ ಪೌರಸನ್ಮಾನ ಕಾರ್ಯಕ್ರಮ ಬಹಿಷ್ಕರಿಸಲು ಕಾಂಗ್ರೆಸ್ ಸದಸ್ಯರು ಮುಂದಾಗಿದ್ದಾರೆ.
ಈ ಕುರಿತು ತುರ್ತು ಮಾಧ್ಯಮಗೋಷ್ಟಿ ನಡೆಸಿದ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪಾಲಿಕೆ ಪ್ರತಿ ಪಕ್ಷದ ಕಾಂಗ್ರೆಸ್ ಸದಸ್ಯರನ್ನು ಕಡೆಗಣನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರೆಲ್ಲರೂ ಪೌರ ಸನ್ಮಾನ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಎಲ್ಲದರಲ್ಲೂ ಬಿಜೆಪಿ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪೌರ ಸನ್ಮಾನ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮ ಎಂದು ಮಾಡಲಾಗುತ್ತಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿಗೆ ಪೌರ ಸನ್ಮಾನ: ಮೇಯರ್ ಈರೇಶ ಅಂಚಟಗೇರಿ
ಕಾರ್ಯಕ್ರಮದ ಸಲುವಾಗಿ ಎಲ್ಲಾ ಕಾರ್ಪೊರೇಟರ್ಗಳನ್ನೊಳಗೊಂಡ ವಿವಿಧ ಕಮಿಟಿ ರಚಿಸಲಾಗುತ್ತದೆ ಎಂದು ಮೇಯರ್ ತಿಳಿಸಿದ್ದರು. ಆದ್ರೆ ಯಾವುದೇ ಕಮಿಟಿ ರಚನೆ ಮಾಡಿಲ್ಲ. ಪ್ರತಿ ಹಂತದಲ್ಲಿ ಪ್ರತಿಪಕ್ಷದವರನ್ನು ಕಡೆಗಣಿಸುತ್ತಾ ಬಂದಿದ್ದಾರೆ. ರಾಷ್ಟ್ರಪತಿ ಅವರೊಂದಿಗೆ ಫೋಟೋ ಸೆಷನ್ ಇತ್ತು. ಅದಕ್ಕೂ ಈಗ ಅವಕಾಶ ಇಲ್ಲ. ಜಾಹೀರಾತು, ಬ್ಯಾನರ್ಗಳಲ್ಲೂ ಕಾಂಗ್ರೆಸ್ ಸದಸ್ಯರನ್ನು ಕಡೆಗಣಿಸುವ ಮೂಲಕ ಅವಮಾನಿಸಲಾಗಿದೆ ಎಂದು ದೂರಿದರು.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿಗೆ ಪೌರ ಸನ್ಮಾನ: ಮೇಯರ್ ಈರೇಶ ಅಂಚಟಗೇರಿ
ಪೌರ ಸನ್ಮಾನ ಹೆಸರಿನಲ್ಲಿ ದುಂದು ವೆಚ್ಚ ಮಾಡಲಾಗುತ್ತಿದೆ. ಪೆಂಡಾಲ್ ಹಾಕಿದ ಮೇಲೆ ಕೊಟೇಶನ್ ಕರೆಯಲಾಗಿದೆ. ಇದರಲ್ಲೂ ಅವ್ಯವಹಾರವಾಗಿದೆ ಎಂದು ಪಾಲಿಕೆ ಕಾಂಗ್ರೆಸ್ ಸದಸ್ಯರು ಆರೋಪಿಸಿದರು.