ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆದರೆ, ನಾಮಪತ್ರ ಸಲ್ಲಿಸುವ ಕೊನೆ ಗಳಿಗೆಯಲ್ಲಿ ಅಸ್ವಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಆನಂದ ಜಾಧವ್ ಆಸ್ಪತ್ರೆ ಸೇರಿದ್ದಾರೆ.
ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿ ಆನಂದ ಜಾಧವ್ ಅವರಿಗೆ ಮೊದಲು ಬಿ-ಫಾರ್ಮ್ ನೀಡಲಾಗಿತ್ತು. ಇವರು ವಾರ್ಡ್ ನಂಬರ್ 13ಕ್ಕೆ ನಾಮಪತ್ರ ಸಲ್ಲಿಕೆ ಮಾಡಬೇಕಿತ್ತು. ಆದರೆ, ಅವರಿಗೆ (ಆಗಸ್ಟ್22) ಭಾನುವಾರ ರಾತ್ರಿ ಲಘು ಹೃದಯಾಘಾತವಾಗಿದ್ದರಿಂದ ಆಸ್ಪತ್ರೆಗೆ ಸೇರಿದ್ದಾರೆ.