ಕರ್ನಾಟಕ

karnataka

ETV Bharat / state

ಕೈಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ: ಮೂರು ದಿನ ಕಳೆದರೂ ಮುಗಿಯದ ಆಯ್ಕೆ ಕಸರತ್ತು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಆಕಾಂಕ್ಷಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ.

By

Published : Aug 21, 2021, 9:18 AM IST

hubli-dharwad Municipal election
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ

ಹುಬ್ಬಳ್ಳಿ: ಸುಮಾರು ಎರಡೂವರೆ ವರ್ಷಗಳಿಂದ ಚುನಾಯಿತ ಅಭ್ಯರ್ಥಿಗಳಿಲ್ಲದೆ ಉಳಿದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಆದರೆ, ಇದೀಗ ಕಾಂಗ್ರೆಸ್​ ಪಾಳೆಯದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವುದೇ ಕಗ್ಗಂಟಾಗಿದೆ ಎನ್ನಲಾಗ್ತಿದೆ.

ಹೌದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಆಕಾಂಕ್ಷಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಅಲ್ಲದೇ, ಅಭ್ಯರ್ಥಿಗಳ ಆಯ್ಕೆಯಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಸತೀಶ್ ಜಾರಕಿಹೋಳಿ, ತನ್ವೀರ್ ಸೇಠ್ ಹಾಗೂ ಧ್ರುವ ನಾರಾಯಣ ನಾಯಕರ ತಂಡ ಹೈರಾಣಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್​ಗಾಗಿ ಗದ್ದಲ ನಡೆಯುತ್ತಿದ್ದು, ತನ್ವೀರ್ ಸೇಠ್​ಗೆ ಮನವಿ ಸಲ್ಲಿಸುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರು ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದು ವೇಳೆ ತಮ್ಮವರಿಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸುವುದಾಗಿ ಕೈ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್​ ಮುಖಂಡರು ನಿರತರಾಗಿದ್ದು, ಇನ್ನೂ ಕೂಡ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿಲ್ಲ. ಗೆಲ್ಲುವವರಿಗೆ ಮಾತ್ರ ಮಣೆ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ.

ABOUT THE AUTHOR

...view details