ಹುಬ್ಬಳ್ಳಿ: ನಗರದ ಕಿಮ್ಸ್ ಗೇಟ್ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ದುರಸ್ತಿ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.
ಹುಬ್ಬಳ್ಳಿ: ಗಾಂಧಿ ಪ್ರತಿಮೆ ದುರಸ್ತಿ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಸಮಿತಿಯಿಂದ ಧರಣಿ - Hubli mahatma Gandhiji statue
ಮಹಾನಗರ ಪಾಲಿಕೆಯು ಹುಬ್ಬಳ್ಳಿ ನಗರದ ಕಿಮ್ಸ್ ಗೇಟ್ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.
Protest
ಮಹಾನಗರ ಪಾಲಿಕೆಯು ಗಾಂಧಿ ಪ್ರತಿಮೆಯನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಗಾಂಧೀಜಿ ಪುತ್ಥಳಿ ದುರಸ್ತಿ ಮಾಡುವಂತೆ ಒತ್ತಾಯಿಸಿದರು.
ಈ ವೇಳೆ ಮಾಜಿ ಶಾಸಕರು, ಮಾಜಿ ಸಂಸದರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಾಲಿಕೆಯ ಮಾಜಿ ಸದಸ್ಯರು ಪಾಲ್ಗೊಂಡಿದ್ದರು.