ಹುಬ್ಬಳ್ಳಿ:ಕಾಂಗ್ರೆಸ್ ಧರ್ಮ ರಾಜಕಾರಣ ಮಾಡುತ್ತಾ ಬಂದಿದೆ. ಪ್ರತ್ಯೇಕ ಲಿಂಗಾಯತ ಹೋರಾಟ ಕೈ ಬಿಟ್ಟು ಈಗ ಲಿಂಗಾಯತ ಸ್ವಾಮೀಜಿ ಆರ್ಶೀವಾದ ಪಡೆಯೋಕೆ ಓಡಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ, ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು.
ಕಾಂಗ್ರೆಸ್ ಧರ್ಮ ರಾಜಕಾರಣ ಮಾಡುತ್ತಾ ಬಂದಿದೆ: ಜಗದೀಶ್ ಶೆಟ್ಟರ್ - undefined
ಇಂದು ಸಂಸದ ಪ್ರಹ್ಲಾದ್ ಜೋಶಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಜಗದೀಶ್ ಶೆಟ್ಟರ್ ಅವರು ಮೈತ್ರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಸಂಸದ ಪ್ರಹ್ಲಾದ್ ಜೋಶಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಮಾಜ ಒಡೆದು ಲಾಭ ತೆಗೆದುಕೊಳ್ಳುವ ಪ್ರಯತ್ನ ಮಾಡಿ ವಿಫಲವಾಗಿದೆ. ಪ್ರತ್ಯೇಕ ಲಿಂಗಾಯತ ಹೋರಾಟ ಕೈಬಿಟ್ಟಿದ್ದಕ್ಕೆ ಎಂ .ಬಿ. ಪಾಟೀಲ್ ಉತ್ತರ ನೀಡಬೇಕು. ಹೋರಾಟ ಮಾಡಿ ಈಗ ಕ್ಷಮೆ ಕೇಳುತ್ತಾರೆ ಇದ್ಯಾವ ಲೆಕ್ಕ ಎಂದು ಪ್ರಶ್ನಿಸಿದರು.
ಬಿಜೆಪಿಯವರು ದುಡ್ಡು ಖರ್ಚು ಮಾಡದೇನೆ ಚುನಾವಣೆ ಮಾಡುತ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ಬಿಜೆಪಿಗೆ ಬೆಂಬಲ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಎಲ್ಲಿ ಆದ್ರೂ ಕಾಣುತ್ತಾರಾ. ಬಹಳ ಹೆಮ್ಮೆಯಿಂದ ಹೇಳುತ್ತೇವೆ. ಬಿಜೆಪಿ ಕಡಿಮೆ ಖರ್ಚಿನಲ್ಲಿ ಚುನಾವಣೆ ಮಾಡುತ್ತಿದೆ. ಕುಮಾರಸ್ವಾಮಿ ಬಿಜೆಪಿ ಏನು ಕೆಲಸ ಮಾಡಿಲ್ಲ ಎಂದು ಟೀಕೆ ಮಾಡುತ್ತಾರೆ. ಉತ್ತರ ಕರ್ನಾಟಕಕ್ಕೆ ಅವರ ಕೊಡುಗೆ ಏನು ಅನ್ನೋದನ್ನ ಹೇಳಲಿ ಎಂದು ಸವಾಲು ಹಾಕಿದರು.