ಹುಬ್ಬಳ್ಳಿ: ಪಕ್ಷ ಸಂಘಟನೆಯ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಹಾವೇರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಭಾಗೀಯ ಮಟ್ಟದ ಸಭೆ ನಡೆಸಿದರು. ಇಲ್ಲಿನ ಗೋಕುಲ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಕಾರ್ಯಕ್ರಮ ನಡೆಯಿತು.
ಪಕ್ಷ ಸಂಘಟನೆಗೆ ಒತ್ತು: ವಿಭಾಗೀಯ ಮಟ್ಟದ ಸಭೆ ನಡೆಸಿದ ಕಾಂಗ್ರೆಸ್ - Hubli Congress News
ಕಾಂಗ್ರೆಸ್ ಪಕ್ಷದ ಸಂಘಟನೆಗೆ ಒತ್ತು ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಾಯಕರು ಹಾವೇರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಭಾಗೀಯ ಮಟ್ಟದ ಸಭೆ ನಡೆಸಿದರು.
ಒಂದೆಡೆ ಬಿಜೆಪಿಯಲ್ಲಿ ಯಡಿಯೂರಪ್ಪ ಯುಗಾಂತ್ಯಗೊಂಡು ಮುಂದೇನು ಎಂಬ ಪ್ರಶ್ನೆ ಮೂಡಿರುವಾಗಲೇ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಲು ಮುಂದಾಗಿದೆ. ಈ ದೃಷ್ಟಿಯಿಂದ ಇಂದು ನಡೆದ ಸಭೆಯಲ್ಲಿ ಜಿಪಂ, ತಾಪಂ, ವಿಧಾನ ಪರಿಷತ್ ಚುನಾವಣೆಗಳ ಜೊತೆಗೆ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.