ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಅರ್ಥವಿಲ್ಲದ ಆರೋಪ ಮಾಡ್ತಿದೆ: ಪ್ರಹ್ಲಾದ್​ ಜೋಶಿ - ಲೆಟೆಸ್ಟ್ ಹುಬ್ಬಳ್ಳಿ ನ್ಯೂಸ್

ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಇದೀಗ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅದಕ್ಕೆ ಅರ್ಥವಿಲ್ಲದ ಆರೋಪ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.

ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಪ್ರಲ್ಹಾದ್ ಜೋಶಿ

By

Published : Nov 3, 2019, 5:50 PM IST

ಹುಬ್ಬಳ್ಳಿ: ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಇದೀಗ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿರುವುದರಿಂದ ಕಾಂಗ್ರೆಸ್​ ಅರ್ಥವಿಲ್ಲದ ಆರೋಪ ಮಾಡುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕುಟುಕಿದ್ದಾರೆ.

ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಪ್ರಹ್ಲಾದ್​ ಜೋಶಿ

ನಗರದಲ್ಲಿಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ನೀಡಿದ್ದಾರೆ ಎನ್ನಲಾದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಮೊದಲನೇಯದಾಗಿ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆದಿಲ್ಲ. ಉಪಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಈ ಹಿಂದೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಹೆಚ್.ಡಿ. ಕುಮಾರಸ್ವಾಮಿ ಮೇಲೆ ಅಸಮಾಧಾನವಿತ್ತು. ಆಗ ಸುಮ್ಮನೆ ಇದ್ದು ಇದೀಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುವುದರಿಂದ ಕಾಂಗ್ರೆಸ್​ನವರು ಕೆಲಸವಿಲ್ಲದೇ ಅರ್ಥವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆಂದು ಹರಿಹಾಯ್ದರು.

ಸಮ್ಮಿಶ್ರ ಸರ್ಕಾರ ಪತನಕ್ಕೆ ಡಿ.ಕೆ.ಶಿವಕುಮಾರ ಕಾರಣವೆಂಬ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಜೋಶಿ, ಈ ವಿಷಯ ಕಾಂಗ್ರೆಸ್​ನವರದ್ದು, ಅವರಲ್ಲಿ ಆಂತರಿಕ ಸಮಸ್ಯೆಯಾಗಿದೆ. ಅಲ್ಲದೇ ರಮೇಶ್ ಜಾರಕಿಹೊಳಿ ಕಾಂಗ್ರೆಸ್​ನಿಂದ ಹೊರಬಂದವರು. ಹಾಗಾಗಿ ಕಾಂಗ್ರೆಸ್​ನ ಎಲ್ಲಾ ವಿಷಯಗಳು ಅವರಿಗೆ ಗೊತ್ತಿರುವುದರಿಂದ ಮಾತನಾಡಿರಬಹುದು ಎಂದರು.

ABOUT THE AUTHOR

...view details