ಕರ್ನಾಟಕ

karnataka

ETV Bharat / state

ಸಿಎಎ ಹೆಸರಿನಲ್ಲಿ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ: ಜಗದೀಶ್ ಶೆಟ್ಟರ್ - ದಲಿತರು ಮತ್ತು ಮುಸ್ಲಿಂ ಸಮುದಾಯದವರನ್ನು ದಾರಿ ತಪ್ಪಿಸುತ್ತಿದೆ

ಸಿಎಎ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ದಲಿತರು ಮತ್ತು ಮುಸ್ಲಿಂ ಸಮುದಾಯದವರನ್ನು ದಾರಿ ತಪ್ಪಿಸುತ್ತಿದೆ ಎಂದು ಸಚಿವ ಜಗದೀಶ್​ ಶೆಟ್ಟರ್​​​ ಆರೋಪಿಸಿದ್ದಾರೆ.

Jagdish Shettar
ಬೃಹತ್​​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

By

Published : Feb 13, 2020, 6:32 PM IST

ಹುಬ್ಬಳ್ಳಿ: ದಲಿತರು ಮತ್ತು ಮುಸ್ಲಿಂ ಸಮುದಾಯದವರನ್ನು ಸಿಎಎ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ದಾರಿ ತಪ್ಪಿಸುತ್ತಿದೆ ಎಂದು ಬೃಹತ್​​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಬೃಹತ್​​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿಎಎ ಕಾಯ್ದೆ ನಮ್ಮ ದೇಶದ ಜನರಿಗೆ ಅನ್ವಯಿಸುವುದಿಲ್ಲ. ಬೇರೆ ಬೇರೆ ದೇಶಗಳಿಂದ ವಲಸೆ ಬಂದವರಿಗೆ ಅನ್ವಯಿಸುತ್ತದೆ. ಪಾಕಿಸ್ತಾನ ಬಾಂಗ್ಲಾದೇಶ ಅಪಘಾನಿಸ್ತಾನಲ್ಲಿರುವ ಬಹು ಸಂಖ್ಯಾತರಿಂದ ಅನ್ಯಾಯಕ್ಕೆ ಒಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಇದಾಗಿದೆ.

ಈ ಕಾಂಗ್ರೆಸ್ ಪಕ್ಷದವರು ದಲಿತರನ್ನು ಹಾಗೂ ಮುಸ್ಲಿಂ ಸಮುದಾಯದವರನ್ನಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅದಕ್ಕೆ ಸರಿಯಾಗಿ ಉತ್ತರ ಕೊಡುವುದಕ್ಕಾಗಿ ಱಲಿಯಲ್ಲಿ ಇಷ್ಟೊಂದು ಜನರು ಸೇರಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶವನ್ನು ಪ್ರಗತಿಯತ್ತ ಸಾಗಿಸುತ್ತಿದ್ದಾರೆ ಎಂದರು.

For All Latest Updates

ABOUT THE AUTHOR

...view details