ಧಾರವಾಡ: ಜಿಲ್ಲೆಯಲ್ಲಿ ಜನಧ್ವನಿ ನಿಮಿತ್ತ ಪ್ರತಿಭಟನೆಯ ಬಳಿಕ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಸ್ಮಾರ್ಟ್‌ಫೋನ್ ವಿತರಣೆ ಮಾಡಿದರು.
ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ವಿತರಿಸಿದ ಕೈ ಮುಖಂಡ ನಾಗರಾಜ್ ಗೌರಿ - ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್
'ನಾವು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ವಿತರಣೆ ಮಾಡಿದ್ದೇವೆ. ಇದರಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು' ಎಂದು ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಧಾರವಾಡ: ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ವಿತರಿಸಿದ ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ
ಕೊರೊನಾ ವೈರಸ್ ಕಾರಣ ಸರ್ಕಾರ ಇದೀಗ ಆನ್ಲೈನ್ ಮೂಲಕ ಶಿಕ್ಷಣ ನೀಡುತ್ತಿದೆ. ಮೊಬೈಲ್ ಕೊಂಡುಕೊಳ್ಳಲು ಸಾಧ್ಯವಿಲ್ಲದ ಬಡ ಮಕ್ಕಳಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ನಾವು ಐವರಿಗೆ ಮೊಬೈಲ್ ವಿತರಣೆ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಹೇಳಿದರು.