ಹುಬ್ಬಳ್ಳಿ: ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ ವೇಳೆ ಹೈಡ್ರಾಮಾ ನಡೆಯಿತು. ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಸಹಸ್ರಾರ್ಜುನ ಜಯಂತಿ ಆಚರಣೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗಿಯಾಗಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಗದೀಶ್ ಶೆಟ್ಟರ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಆಗ ಬಿಜೆಪಿ ಕಾರ್ಯಕರು ಪ್ರತಿಭಟನಾನಿರತ ವಿರುದ್ಧ ಘೋಷಣೆ ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರ ಕೈಯಲ್ಲಿನ 40 ಪರ್ಸೆಂಟ್ ಕಮಿಷನ್ ಪೋಸ್ಟರ್ ಕಿತ್ತುಕೊಂಡು ಹರಿದು ಹಾಕಿದರು. ಈ ವೇಳೆ, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ - ತಳ್ಳಾಟ ನಡೆದಿದೆ. ಪ್ರತಿಭಟನೆ ವೇಳೆ ನುಗ್ಗಿ ಕೇಸರಿ ಶಾಲು ಹಾರಾಡಿಸಿದ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಕರೆದುಕೊಂಡು ಹೋದರು.