ಹುಬ್ಬಳ್ಳಿ :ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಸಿಎಂ ಆಗಬೇಕೆಂಬುವವರಿದ್ದಾರೆ. ಇವರಿಬ್ಬರು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಸ್ತಿತ್ವವನ್ನು ಕಳೆದುಕೊಂಡು ನಶಿಸಿ ಹೋಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ದುರ್ಬೀನ್ ಹಿಡಿದು ನೋಡಬೇಕಾತ್ತದೆ. ಪಂಚ ರಾಜ್ಯ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂಗೆ ಹೋಗುತ್ತದೆ ಎಂದು ವ್ಯಂಗ್ಯವಾಡಿದರು.