ಹುಬ್ಬಳ್ಳಿ: ಮನೆ ಮನೆ ಪ್ರಚಾರ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾರಾಮಾರಿ ನಡೆದಿದೆ.
ಪ್ರಚಾರದ ವೇಳೆ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಸೆಕ್ಷನ್ 144 ಜಾರಿ - undefined
ಮನೆ ಮನೆ ಪ್ರಚಾರ ಮಾಡುತ್ತಿದ್ದ ಕೈ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೊಪ ಕೇಳಿಬಂದಿದೆ.
![ಪ್ರಚಾರದ ವೇಳೆ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಸೆಕ್ಷನ್ 144 ಜಾರಿ](https://etvbharatimages.akamaized.net/etvbharat/prod-images/768-512-3319895-thumbnail-3x2-hbl.jpg)
ಕುಂದಗೋಳ ವಿಧಾನಸಭಾ ಕ್ಷೇತ್ರದ ಅದರಗುಂಚಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆ ಪ್ರಚಾರ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಬಿಜೆಪಿ ಕಾರ್ಯಕರ್ತರು ಪ್ರಚಾರ ಮಾಡಬೇಡಿ ಎಂದು ಜಗಳ ತಗೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಶಿವಪ್ಪ ಉಳ್ಳಾಗಡ್ಡಿ, ಮುಕ್ತುಂ ಎಂಬ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಬೆಂಬಲಿತ ಕಾರ್ಯಕರ್ತರಾದ ಮಲ್ಲಿಕಾರ್ಜುನ ಬುರುಡಿ ಹಾಗೂ ಗುರಿಸಿದ್ದಪ್ಪ ಜವಳಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದರಗುಂಚಿ ಗ್ರಾಮದಲ್ಲಿ ನಾಳೆ ಸಂಜೆವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ.