ಕರ್ನಾಟಕ

karnataka

ETV Bharat / state

ಪೆಟ್ರೋಲ್​ ಬೆಲೆ ಖಂಡಿಸಿ ಎತ್ತಿನ ಗಾಡಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್​​ ! - latest hubli news

ನಗರದ ಚೆನ್ನಮ್ಮ ವೃತ್ತದಿಂದ ಐಟಿ ಪಾರ್ಕ್ ಮಾರ್ಗವಾಗಿ ಹೊಸೂರಿನ ದುರ್ಗಾದೇವಿ ದೇವಸ್ಥಾನದವರೆಗೆ ಸೈಕಲ್ ಹಾಗೂ ಎತ್ತನ ಬಂಡೆಯ ಮೇಲೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

congress-protest
ಪ್ರತಿಭಟನೆ ನಡೆಸಿದ ಕಾಂಗ್ರೆಸ್

By

Published : Jun 29, 2020, 5:02 PM IST

ಹುಬ್ಬಳ್ಳಿ :ಇಂಧನ‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​​ ಕಾರ್ಯಕರ್ತರು ಸೈಕಲ್​ ಹಾಗೂ ಎತ್ತಿನ ಗಾಡಿ ಮೆರವಣಿಗೆ ಸಾಗುವ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಚೆನ್ನಮ್ಮ ವೃತ್ತದಿಂದ ಐಟಿ ಪಾರ್ಕ್ ಮಾರ್ಗವಾಗಿ ಹೊಸೂರಿನ ದುರ್ಗಾದೇವಿ ದೇವಸ್ಥಾನದವರೆಗೆ ಸೈಕಲ್ ಹಾಗೂ ಎತ್ತನ ಬಂಡೆಯ ಮೇಲೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಲಾಕ್​ಡೌನ್ ಸಂದರ್ಭದಲ್ಲಿ ಸಾಮಾನ್ಯ ಜನರಿಗೆ ಜೀವನ ನಿರ್ವಹಣೆ ‌ಕಷ್ಟವಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ತೈಲ ಬೆಲೆ ಏರಿಕೆ ಮಾಡುವ ಮೂಲಕ ಮಧ್ಯಮ ‌ವರ್ಗದ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.

ABOUT THE AUTHOR

...view details