ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಿ ಮೋದಿ, ಸಚಿವ​ ಶೆಟ್ಟರ್ ಕಟೌಟ್​ಗೆ ಸನ್ಮಾನ - ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಿಗೆ ಸನ್ಮಾನ

ಮಳೆ ನೀರು ತುಂಬಿದ್ದ ರಸ್ತೆ ಗುಂಡಿಯಲ್ಲಿ ಪ್ರಧಾನಿ ಮೋದಿ ಹಾಗೂ ಸಚಿವ ಜಗದೀಶ್​ ಶೆಟ್ಟರ್ ಕಟೌಟ್​​ಗೆ ಶಾಲು ಹೊದಿಸಿ, ಹೂ ಮಾಲೆ ಹಾಕಿ, ಸನ್ಮಾನಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

congress protest against government in hubblli
ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಿ ಮೋದಿ, ಸಚಿವ​ ಶೆಟ್ಟರ್ ಭಾವಚಿತ್ರಕ್ಕೆ ಸನ್ಮಾನ

By

Published : Jun 18, 2021, 1:32 PM IST

ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿದ್ದರೂ ಕೂಡ ರಸ್ತೆ ಗುಂಡಿಗಳಿಗೆ ಮಾತ್ರ ಮುಕ್ತಿ ಸಿಗುತ್ತಿಲ್ಲ.

ಈ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಗುಂಡಿಗಳಲ್ಲಿ ಪ್ರಧಾನಿ ಮೋದಿ ಹಾಗೂ ಸಚಿವ ಜಗದೀಶ್​ ಶೆಟ್ಟರ್ ಕಟೌಟ್​​​ಗೆ ಹೂ ಮಾಲೆ ಹಾಕಿ ಸನ್ಮಾನಿಸಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯಲ್ಲಿ ವಿಭಿನ್ನ ಪ್ರತಿಭಟನೆ

ರಸ್ತೆಯಲ್ಲಿದ್ದ ತಗ್ಗು ಗುಂಡಿಗಳಲ್ಲಿ ನರೇಂದ್ರ ಮೋದಿ ಹಾಗೂ ಜಗದೀಶ ಶೆಟ್ಟರ್ ಕಟೌಟ್​ಗೆ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಿ, ಕಾಗದದ ದೋಣಿ ಹರಿಬಿಟ್ಟು ಪ್ರತಿಭಟನೆ ನಡೆಸಿದರು. ತಗ್ಗು ಗುಂಡಿಗಳು ಹಾಗೂ ಹಾಳಾದ ರಸ್ತೆ ದುರಸ್ತಿಗೊಳಿಸದ ಹಿನ್ನೆಲೆ ಈ ರೀತಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಈ ಕೂಡಲೇ ರಸ್ತೆ ಹಾಗೂ ತಗ್ಗು ಗುಂಡಿಗಳನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ:ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ : ಹೆಚ್​ಡಿಕೆ

ABOUT THE AUTHOR

...view details