ಧಾರವಾಡ: ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭ್ರಷ್ಟಾಚಾರ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ
ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕೊರೊನಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ನೂರಾರು ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕೊರೊನಾ ಸಾಮಗ್ರಿ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ. ಅವುಗಳ ಕುರಿತು ಸಂಪೂರ್ಣ ತನಿಖೆಯಾಗಬೇಕು. ಆ ಇಲಾಖೆಗೆ ಸಂಬಂಧಿಸಿದ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.