ಧಾರವಾಡ :ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟಿಸಿದರು.
ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ - CCB raid on DK Shivakumar residence
ಇಡಿ ಮತ್ತು ಸಿಬಿಐ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಂಡು ಕಾಂಗ್ರೆಸ್ ಮುಖಂಡರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ..

ಧಾರವಾಡದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಧಾರವಾಡದ ಕಲಾಭವನದ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರ ರಾಜಕೀಯ ಪ್ರೇರಿತ ದಾಳಿ ಮಾಡಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇಡಿ ಮತ್ತು ಸಿಬಿಐ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಂಡು ಕಾಂಗ್ರೆಸ್ ಮುಖಂಡರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.