ಕರ್ನಾಟಕ

karnataka

ETV Bharat / state

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ - Dharwad Congress protest in front of DC office News

ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಎರಡು ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಿ ಸರ್ಕಾರದಿಂದ ಬರುವ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

By

Published : Aug 13, 2020, 1:59 PM IST

ಧಾರವಾಡ: ತಾಲೂಕಿನ ಎರಡು ಪ್ರತ್ಯೇಕ ಗ್ರಾಮಗಳಲ್ಲಿ ನಡೆದ ಅತ್ಯಾಚಾರ ಖಂಡಿಸಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಅತ್ಯಾಚಾರಿಗಳ ವಿರುದ್ಧ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಎರಡೂ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಿ ಸರ್ಕಾರದಿಂದ ಬರುವ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತಂದು ಹೊರ ದೇಶದಲ್ಲಿರುವಂತೆ ಬಹಿರಂಗ ಗಲ್ಲು ಶಿಕ್ಷೆ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details