ಹುಬ್ಬಳ್ಳಿ:ಗ್ಯಾಸ್ ಸಿಲಿಂಡರ್ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿತು.
ಒಲೆ ಹೊತ್ತಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - Congress protests against central government in Hubli,
ಗ್ಯಾಸ್ ಸಿಲಿಂಡರ್ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿತು.
![ಒಲೆ ಹೊತ್ತಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Congress protests, Congress protests against central government, Congress protests against central government in Hubli, ಕಾಂಗ್ರೆಸ್ ಪ್ರತಿಭಟನೆ, ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಹುಬ್ಬಳ್ಳಿಯಲ್ಲಿ ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ,](https://etvbharatimages.akamaized.net/etvbharat/prod-images/768-512-5664533-583-5664533-1578665175837.jpg)
ಒಲೆ ಹೊತ್ತಿಸಿ ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಒಲೆ ಹೊತ್ತಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಬದನೆಕಾಯಿ, ಉಳ್ಳಾಗಡ್ಡಿ, ಟೊಮ್ಯಾಟೊ ಸೇರಿದಂತೆ ಇತರ ತರಕಾರಿಗಳಿಂದ ಅಡುಗೆ ಮಾಡಿ, ತಟ್ಟೆಗಳನ್ನು ಬಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಕಾಕಿದರು.
ಕೇಂದ್ರ ಬಿಜೆಪಿ ಸರ್ಕಾರ ಹೊಸ ವರ್ಷಕ್ಕೆ ದೇಶದ ಬಡವರಿಗೆ, ರೈತರಿಗೆ, ಮಹಿಳೆಯರಿಗೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿ ಬೆಲೆ ಬಿಸಿ ಕೊಡುಗೆ ಕೊಟ್ಟಿದೆ. ಕೂಡಲೇ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಜನಸಾಮಾನ್ಯರ ಹೊರೆ ತಗ್ಗಿಸಬೇಕು ಎಂದು ಒತ್ತಾಯಿಸಿರು.
TAGGED:
ಕಾಂಗ್ರೆಸ್ ಪ್ರತಿಭಟನೆ,