ಹುಬ್ಬಳ್ಳಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ತೈಲ, ಅಡುಗೆ ಅನಿಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಹು-ಧಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿಯೇ ಕಟ್ಟಿಗೆ ಒಲೆ ಹೂಡಿ ಅಡುಗೆ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.
ಬೆಲೆ ಏರಿಕೆಗೆ ಖಂಡನೆ: ರಸ್ತೆಯಲ್ಲಿ ಅಡುಗೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ! - ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಜನಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
![ಬೆಲೆ ಏರಿಕೆಗೆ ಖಂಡನೆ: ರಸ್ತೆಯಲ್ಲಿ ಅಡುಗೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ! Congress protests against central government in Hubli](https://etvbharatimages.akamaized.net/etvbharat/prod-images/768-512-10757552-thumbnail-3x2-vis.jpg)
ರಸ್ತೆಯಲ್ಲಿ ಅಡುಗೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ!
ರಸ್ತೆಯಲ್ಲಿ ಅಡುಗೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ!
ನಗರದಲ್ಲಿ ಧಿಕ್ಕಾರ ಕೂಗಿ, ತಲೆ ಮೇಲೆ ಕಟ್ಟಿಗೆ ಹೊತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತೈಲ ಬೆಲೆ ಹಾಗೂ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಜೀವನದ ಮೇಲೆ ಹೊರೆಯಾಗುತ್ತಿದೆ.
ಲಾಕ್ಡೌನ್ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಸಂಕಷ್ಟ ಅನುಭವಿಸಿದ ಜನರಿಗೆ ಬೆಲೆ ಏರಿಕೆ ಜೀವ ಹಿಂಡುತ್ತಿದೆ. ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.