ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ‍್ಯಾಲಿ - ಹುಬ್ಬಳ್ಳಿ ಇತ್ತೀಚಿನ ಸುದ್ದಿ

ರೈತ ವಿರೋಧಿ ಕಾನೂನುಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಗ್ಯಾಸ್, ತೈಲ ಬೆಲೆ ಏರಿಕೆ ಇಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ನವಲಗುಂದದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.

Hubli
ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ‍್ಯಾಲಿ

By

Published : Feb 17, 2021, 7:20 PM IST

Updated : Feb 17, 2021, 7:26 PM IST

ಹುಬ್ಬಳ್ಳಿ: ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಮತ್ತು ಗ್ಯಾಸ್, ತೈಲ ಬೆಲೆ ಏರಿಕೆ ಇಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ನವಲಗುಂದದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.

ತಾಲೂಕಿನ ನವಲಗುಂದದ ಗಣೇಶ ಗಡಿಯಿಂದ ತಹಶೀಲ್ದಾರರ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಅವರು, "ದೇಶದ 62 ಕೋಟಿ ರೈತರು ಸರ್ವಾಧಿಕಾರಿ ಕೇಂದ್ರ ಸರ್ಕಾರ ತಂದಿರುವ ಮೂರು ರೈತ ಕಾಯ್ದೆಗಳ ವಿರುದ್ಧ 75 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ, ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಗಳ ಕಾರಣಗಳಿಂದ ಸುಮಾರು 155 ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ತಕ್ಷಣವೇ ಈ ಕಾಯ್ದೆಗಳನ್ನು ರದ್ದು ಮಾಡಬೇಕೆಂದು" ಕಿಡಿಕಾರಿದರು.

ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ‍್ಯಾಲಿ

ಕಾಂಗ್ರೆಸ್​ ಪಕ್ಷದ ಸರ್ಕಾರಗಳು ರೈತರ ಹಿತಾಸಕ್ತಿಗಳನ್ನು ಕಾಪಾಡಲು ಸತತ ಪ್ರಯತ್ನಗಳನ್ನು ಮಾಡಿವೆ. ಅದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಗ್ಯಾಸ್ ಹಾಗೂ ತೈಲ ಬೆಲೆ ಏರಿಕೆ ಮಾಡುವ ಮೂಲಕ ಹೊರೆ ಹಾಕಿದೆ. ಸರ್ಕಾರದ ನಡೆ ಖಂಡನೀಯ. ಕೂಡಲೇ ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

Last Updated : Feb 17, 2021, 7:26 PM IST

ABOUT THE AUTHOR

...view details