ಧಾರವಾಡ:ಕಳೆದ ಒಂದು ವಾರದಿಂದ ನಗರದ ಪ್ರಮುಖ ಕಡೆಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ..
ಕಲುಷಿತ ನೀರು ಪೂರೈಕೆ ಆರೋಪ: ಶುದ್ಧ ನೀರು ಪೂರೈಕೆಗೆ ಜನರ ಆಗ್ರಹ - contaminated water supply in dharwad
ಧಾರವಾಡದ ಸರಸ್ವತಪುರ ನಗರದ ದೇವತಾರಾ ಅಪಾರ್ಟ್ಮೆಂಟ್ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಆರೋಗ್ಯ ಹದಗೆಡುತ್ತಿದೆ ಎಂದು ಅಪಾರ್ಟ್ಮೆಂಟ್ ನಿವಾಸಿಗಳು ಆರೋಪಿಸಿದ್ದಾರೆ.
ಕಲುಷಿತ ನೀರು ಪೂರೈಕೆ ಆರೋಪ
ಧಾರವಾಡದ ಸರಸ್ವತಪುರ ನಗರದ ದೇವತಾರಾ ಅಪಾರ್ಟ್ಮೆಂಟ್ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ನೀರು ಕೆಟ್ಟ ವಾಸನೆ ಸಹ ಬರುತ್ತಿದೆ ಎಂದು ಅಪಾರ್ಟ್ಮೆಂಟ್ ನಿವಾಸಿಗಳು ದೂರಿದ್ದಾರೆ.
ಕಲುಷಿತ ನೀರಿನಿಂದಾಗಿ ಅಲ್ಲಿನ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ದಿನದ 24 ಗಂಟೆಯೂ ಜಲಮಂಡಳಿ ಯವರು ನೀರು ಪೂರೈಕೆ ಮಾಡುತ್ತಿರುವುದರಿಂದ ತಕ್ಷಣವೇ ಸಮಸ್ಯೆ ಬಗೆಹರಿಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ನಿವಾಸಿಗಳು ಎಚ್ಚರಿಸಿದ್ದಾರೆ.