ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಹಾಗೂ ಧಾರವಾಡ ಜಿಲ್ಲಾ ಗುತ್ತಿಗೆ, ಹೊರ ಗುತ್ತಿಗೆ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗುತ್ತಿಗೆ ನೌಕರರ ಸಂಘ ಪ್ರತಿಭಟನೆ - Contract of Employees Union Protest
ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಾಹಿಸುತ್ತಿರುವ, ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಕೆಲಸಕ್ಕೆ ತಕ್ಕಂತೆ ಸಮಾನ ವೇತನ ಸೇವಾ ಭದ್ರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ನಗರದ ತಹಶೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಾಹಿಸುತ್ತಿರುವ, ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಕೆಲಸಕ್ಕೆ ತಕ್ಕಂತೆ ಸಮಾನ ವೇತನ ಸೇವಾ ಭದ್ರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಸಮಾನ ವೇತನ, ಸೇವಾ ಭದ್ರತೆ, ಮತ್ತು ಗುತ್ತಿಗೆ ಆಧಾರ ಪದ್ಧತಿ ಕೈಬಿಡಬೇಕು ಎಂದು ಮನವಿ ಮಾಡಿದರು. ಕೂಡಲೇ ರಾಜ್ಯ ಸರ್ಕಾರ ಎಲ್ಲ ಬೇಡಿಕೆಯನ್ನು ಈಡೇರಿಸದಿದ್ದರೇ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.