ಹುಬ್ಬಳ್ಳಿ: ನೇರ ವೇತನ ಪಾವತಿಗಾಗಿ ಆಗ್ರಹಿಸಿ ಹು-ಧಾ ಮಹಾನಗರ ಪಾಲಿಕೆ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ವೇತನ ಪಾವತಿಗಾಗಿ ಆಗ್ರಹಿಸಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ - ಕಾರ್ಮಿಕರ ಪ್ರತಿಭಟನೆ
ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿ ಎದುರು ಹು-ಧಾ ಮಹಾನಗರ ಪಾಲಿಕೆ ಗುತ್ತಿಗೆ ಕಾರ್ಮಿಕರು ಅಧಿಕಾರಿಗಳ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿ ಎದುರು ಗುತ್ತಿಗೆ ಕಾರ್ಮಿಕರ ಮೌನ ಪ್ರತಿಭಟನೆ
ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು, ಪಾಲಿಕೆ ಅಧಿಕಾರಿಗಳ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಹು-ಧಾ ಪಾಲಿಕೆ ಅಧಿಕಾರಿಗಳು ಸರಿಯಾಗಿ ಸಂಬಳ ನಿಡುತ್ತಿಲ್ಲ. ಕಳೆದ ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ದೂರಿದರು.
ನಮಗೆ ಸರಿಯಾಗಿ ವೇತನ ನೀಡಿದರೆ ಮಾತ್ರ ಕೆಲಸ ಮಾಡುತ್ತೇವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ವೇತನ ನೀಡಬೇಕು. ಇಲ್ಲವಾದ್ರೆ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.