ಧಾರವಾಡ :ಬಡವರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಸಿಗಲಿ ಎಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನ ಆರಂಭಿಸಿತ್ತು. ಸರ್ಕಾರದ ಆಶಯವೇನೋ ಸರಿಯಿತ್ತು. ಆದರೆ, ಅದಕ್ಕೆ ಬೇಕಾದ ಅನುದಾನದ ವಿಚಾರದಲ್ಲಿ ಯಾವುದೇ ದೂರದೃಷ್ಟಿ ಇಲ್ಲದೇ ಕಾರಣ ಕ್ಯಾಂಟೀನ್ ಆರಂಭಿಸಿರುವ ಹಿನ್ನೆಲೆಯಲ್ಲಿ ಅವು ಬಂದ್ ಆಗೋ ಪರಿಸ್ಥಿತಿಗೆ ಬಂದು ತಲುಪಿವೆ.
ಎಲ್ಲಾ ಜಿಲ್ಲೆಗಳಿಗಿಂತ ಕೊನೆಯದಾಗಿ ಆರಂಭಗೊಂಡ ಅವಳಿ ನಗರಗಳ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ವಿತರಣೆ ಮಾಡದ ಹಿನ್ನೆಲೆಯಲ್ಲಿ ಇಷ್ಟರಲ್ಲಿಯೇ ಬಂದ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಧಾರವಾಡ ನಗರದ ಮಿನಿ ವಿಧಾನಸೌಧದ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಅನುದಾನದ ಕೊರತೆಯಿಂದ ಬಂದ್ ಆಗುವ ಹಂತಕ್ಕೆ ಬಂದು ನಿಂತಿದೆ. ಕ್ಯಾಂಟೀನ್‌ಗಳಿಗೆ ಅನುದಾನದ ಕೊರತೆಯಾಗಿದ್ದರಿಂದ ಇವುಗಳನ್ನು ಮುಚ್ಚಲು ಗುತ್ತಿಗೆದಾರರು ನಿರ್ಧರಿಸಿದ್ದಾರೆ.