ಧಾರವಾಡ:ನಗರದಲ್ಲಿಇಬ್ಬರು ಶಂಕಿತರ ಪೈಕಿ ಒಬ್ಬರ ವರದಿ ನೆಗೆಟಿವ್ ಎಂದು ಬಂದಿದೆ. ಇನ್ನೊಬ್ಬರ ವರದಿ ಬರಬೇಕಿದೆ.
ಕೊರೊನಾ ಸೋಂಕು: ಧಾರವಾಡದ ಒಬ್ಬನ ವರದಿ ನೆಗೆಟಿವ್
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಮತ್ತೊಂದು ವರದಿ ನೆಗೆಟಿವ್
ಈ ಇಬ್ಬರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 378 ಜನರ ಮೇಲೆ ನಿಗಾ ವಹಿಸಲಾಗಿದ್ದು, ಅದರಲ್ಲಿ 229 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ. ಇಬ್ಬರನ್ನು ಆಸ್ಪತ್ರೆಯ ಐಸೋಲೇಷನ್ನಲ್ಲಿ ಇರಿಸಲಾಗಿದೆ. 133 ಜನರನ್ನು 14 ದಿನ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಇನ್ನು 14 ಜನರ ಕ್ವಾರಂಟೈನ್ ಪೂರ್ಣಗೊಡಿದೆ ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.