ಹುಬ್ಬಳ್ಳಿ:ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ 2ನೇ ಘಟಕದ ನಿರ್ವಾಹಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆತನ ಸಂಪರ್ಕದಲ್ಲಿದ್ದ ಮೂವರು ಡ್ರೈವರ್ಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಸೋಂಕಿತ ನಿರ್ವಾಹಕ ಕಲಬುರಗಿ ಮೂಲದವರಾಗಿದ್ದು, ಹಲವು ವರ್ಷಗಳಿಂದ ಹುಬ್ಬಳ್ಳಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವಾರ ಕರ್ತವ್ಯ ನಿರ್ವಹಿಸಿ ಒಂದು ವಾರ ರಜೆಗೆ ತೆರಳಿದ್ದರು ಎನ್ನಲಾಗುತ್ತಿದೆ.
ವಾಯುವ್ಯ ಕರ್ನಾಟಕ ಸಾರಿಗೆ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ - Corona attacks hubli NWKRTC Conducter
ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ.
Hubli
ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಜೊತೆಗೆ ಕರ್ತವ್ಯ ನಿರ್ವಹಿಸಿದ್ದ ಚಾಲಕರು ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದ್ದು, ಘಟಕದ ಬಸ್‌ಗಳು ಹಾಗೂ ನಿಲ್ದಾಣದಲ್ಲಿ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ.